ಬೆಂಗಳೂರು: ಶಿವಮೊಗ್ಗದ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಮುಸಲ್ಮಾನರು ಎಂದೂ ಕೂಡ ಬಾಲ ಬಿಚ್ಚಿರಲಿಲ್ಲ. ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಧ್ವಜದ ವಿಚಾರದಲ್ಲಿ ಪ್ರಚೋದನಾ ಹೇಳಿಕೆ ನೀಡಿದ್ದರು. ಡಿಕೆಶಿ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ.  ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇನ್ನು ಹರ್ಷ ಹತ್ಯೆಯಾದ ಯುವಕ ನ ಬಗ್ಗೆ ಮಾತನಾಡಿದ ಸಚಿವ ಈಶ್ವರಪ್ಪ ತುಂಬಾ ಪ್ರಾಮಾಣಿಕ ಹಾಗೂ ಸಜ್ಜನ ಕಾರ್ಯಕರ್ತ ಇವನನ್ನ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ. ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡುತ್ತೇವೆ. ಈಗಾಗಲೇ ಗೃಹ ಸಚಿವರಿಗೆ ಮಾತಾಡಿದ್ದೇನೆ ಎಂದರು.

ಇದೇ ವೇಳೆ ಶಿವಮೊಗ್ಗದಲ್ಲಿ ಈ ರೀತಿಯ ಗೂಂಡಾಗಿರಿ ಮುಂದುವರೆಯಲು ನಾವು ಬಿಡುವುದಿಲ್ಲ. ಗುಂಡಾಗಳನ್ನು ದಮನ ಮಾಡುತ್ತೇವೆ ಎಂದಿದ್ದಾರೆ.