ಹಾಸನ: ಸಕಲೇಶಪುರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆಸ್ಪತ್ರೆಯಲ್ಲಿ ಪಿಜಿಷಿಯನ್ ಮತ್ತು ಅರವಳಿಕೆ ತಜ್ಞರಿಲ್ಲ ಎನ್ನಲಾಗಿದ್ದು, ಇದರಿಂದ ರೋಗಿಗಳು ಪರದಾಡುವಂತಾಗಿದೆ. ತಾಲ್ಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪ್ರತಿನಿತ್ಯ ನೂರರ ಗಡಿ ದಾಟುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಸೋಂಕಿತರು  ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾಗ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಎದುರಾಗಿದ್ದು, ಇರುವ ವೈದ್ಯರು ಒತ್ತಡದಿಂದ ಕೆಲಸ ಮಾಡುವಂತಾಗಿದೆ.

ಕೊರೋನಾ ಸೋಂಕಿತರ ಚಿಕಿತ್ಸೆಗೆ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಆಮ್ಲ ಜನಕ ಇರುವ 40 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಈಗ 32 ಮಂದಿ ದಾಖಲಾಗಿದ್ದಾರೆ. ಪಿಜೀಷಿಯನ್ ಹಾಗು ಅರವಳಿಕೆ ತಜ್ಞರು ಇಲ್ಲ ಹೆಚ್ಚುವರಿ ಶ್ರುಶ್ರೂಷಕರು ಮತ್ತು ಡಿ ದರ್ಜೆ ನೌಕರರ ಅವಶ್ಯಕಥೆ ಇದೆ. ಈ ಎಲ್ಲಾ ಕೊರತೆಗಳ ನಡುವೆಯೂ ಕೋವಿಡ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕ್ರಾಫರ್ಡ್ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಎಂ ಆರ್ ಮಧುಸೂದನ್ ತಿಳಿಸಿದ್ದಾರೆ.

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಕೂಡ ಸಿಬ್ಬಂದಿ ಸಂಖ್ಯೆ ಹಿಂದಿನಷ್ಟೇ ಇದೆ. ಕೆಲ ವೈದ್ಯರು ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

 

By admin