ಚಾಮರಾಜನಗರ: ತಾಲೂಕಿನ ಕಿಲಗೆರೆ ಗ್ರಾಮದಲ್ಲಿ ನೂತನ ಶ್ರೀ ವಾಲ್ಮೀಕಿ ಸಮುದಾಯಭವನದ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೧೦ ಲಕ್ಷ ರೂ.ವೆಚ್ಚದಲ್ಲಿ ವಾಲ್ಮೀಕಿ ಸಮುದಾಯಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ. ಭವನ ನಿರ್ಮಿಸುವುದು ದೊಡ್ಡದಲ್ಲ. ಉತ್ತಮ ಕೆಲಸಗಳಿಗೆ ವಿನಿಯೋಗಿಸಿದಾಗ ಮಾತ್ರ ಅದು ಸಾರ್ಥಕವಾಗಲಿದೆ. ಶುಭ ಕಾರ್ಯಗಳಿಗೆ ಹಾಗೂ ಮಹಿಳಾ ಸಂಘಟನೆಗಳು ಕೌಶಲ್ಯಾಧರಿತ ಚಟುವಟಿಕೆಗಳಿಗೆ ಬಳಸಿಕೊಂಡು ಆರ್ಥಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು. ಆ ಮೂಲಕ ಭವನ ಸದಾ ಚಟುವಟಿಕೆಗಳಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಮ್ಮ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಾ ಸಮುದಾಯದವರಿಗೂ ಅಗತ್ಯವಾಗಿ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಬದ್ದರಾಗಿರುವುದಾಗಿ ಹೇಳಿದರು.
ಕೇಂದ್ರ ಪರಿಹಾರ ಸಮಿತಿಅಧ್ಯಕ್ಷ ಎಂ.ರಾಮಚಂದ್ರ, ಅಮಚವಾಡಿ ಗ್ರಾ.ಪಂ ಅಧ್ಯಕ್ಷ ಮಹೇಂದ್ರ, ಕಿಲಗೆರೆ ಗ್ರಾ.ಪಂ ಸದಸ್ಯ ಮಹೇಶ್‌ಕುಮಾರ್ ಮುಖಂಡರಾದ ಶಂಭಪ್ಪ ಎ.ಎಸ್ ಗುರುಸ್ವಾಮಿ, ರಂಗಸ್ವಾಮಿ, ಶೇಖರಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ತಾಲೂಕು
ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುಬ್ಬರಾಯ, ನಿರ್ಮಿತಿ ಕೇಂದ್ರದ ಎಂಜಿನಿಯರ್ ಭೀಮ್ ಸಾಗರ್ ಸೇರಿದಂತೆ ಗ್ರಾಮದ ಮುಖಂಡರು ಗ್ರಾಮಸ್ಥರು ಹಾಜರಿದ್ದರು.