ಗುಂಡ್ಲುಪೇಟೆ: ಪಟ್ಟಣ ಪುರಸಭೆಯ ಅಧಿಕಾರ ಹಿಡಿದಿರುವ ಬಿಜೆಪಿ ಪಟ್ಟಣದ ಅಭಿವೃದ್ಧಿಯ ಕಡೆ ಗಮನಹರಿಸಿ ಎಲ್ಲಾ ವಾರ್ಡ್ ಗಳನ್ನು ಸಮನಾಗಿ ಕಾಣಬೇಕು ಎಂದು ಪುರಸಭಾ ಎಸ್ಡಿಪಿಐ ಸದಸ್ಯ ರಾಜ್ ಗೋಪಾಲ್ ತಿಳಿಸಿದರು.
ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಬೆಂಬಲ ತೋರದೇ ತಟಸ್ಥ ನಿಲುವು ತೋರಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಕ್ಕೆ ಗೌರವ ನೀಡಿ ಚುನಾವಣೆಯಲ್ಲಿ ಪಾಲ್ಗೊಂಡಿದ್ದೇನೆ ಹೊರತು, ವಿರೋಧಿ ಪಕ್ಷ ಬಿಜೆಗೆ ಯಾವುದೇ ರೀತಿಯ ಬೇಷರತ್ ಬೆಂಬಲ‌ ನೀಡಿಲ್ಲ ಎಂದು ಸ್ಪಷ್ಟ ಪಡಿಸಿದರು.
ಈ ಬಾರಿ ಪುರಸಭೆ ಅಧಿಕಾರವನ್ನು ಬಿಜೆಪಿ ಪಕ್ಷದವರು ಹಿಡಿದಿದ್ದು, ಉತ್ತಮ ಕೆಲಸಗಳನ್ನು ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಪುರಸಭೆಯ ಆಡಳಿತದ ಒಳಗೆ ಮತ್ತು ಹೊರಗೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ವಿಚಾರವಾಗಿ ಹೋರಾಟಗಳನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವರದಿ: ಬಸವರಾಜು ಎಸ್ ಹಂಗಳ

By admin