ಮೈಸೂರು: ಮೈಸೂರು ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಬ್ಬರ ನಡುವಿನ ಬೀದಿರಂಪ ಮತ್ತು ವರ್ಗಾವಣೆಗೆ ಭೂಮಾಫಿಯಾ ಕಾರಣವಾಗಿದ್ದರೆ ಸೂಕ್ತ ತನಿಖೆ ನಡೆಯಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಂಜನಗೂಡು ತಾಲೂಕು ವರುಣಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೀಗ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ನನ್ನ ವರ್ಗಾವಣೆಗೆ ಭೂಮಾಫಿಯ ವೇ ಕಾರಣವೆಂದು ಆರೋಪಿಸಿದ್ದಾರೆ. ಇದರ ಸತ್ಯಾಸತ್ಯತೆ ಹೊರಗೆ ಬರಬೇಕಾದರೆ ಈ ಬಗ್ಗೆ ಸೂಕ್ತ ತನಿಖೆಯಾಗಬೇಕಾದ ಅಗತ್ಯವಿದೆ. ಈಗಾಗಲೇ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಇಬ್ಬರು ಅಧಿಕಾರಿಗಳು ಮಾಡಿದ ಆರೋಪ-ಪ್ರತ್ಯಾರೋಪಗಳು ಮೈಸೂರು ಜಿಲ್ಲೆಯ ಜನತೆಯನ್ನು ತಲೆತಗ್ಗಿಸುವಂತೆ ಮಾಡಿದೆ ಕಿಡಿಕಾರಿದರಲ್ಲದೆ, ಈ ವಿಚಾರವಾಗಿ ಸರ್ಕಾರ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಬಿ.ಎಂ.ಮಹೇಶ್ ಕುಮಾರ್, ದೊರೆಸ್ವಾಮಿ, ಬೀರಪ್ಪ ಸೇರಿದಂತೆ ಹಲವರು ಇದ್ದರು.

By admin