ಚಾಮರಾಜನಗರ:ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಜೂನ್ ೨೦ ರಂದು ನಿಗದಿಯಾಗಿದ್ದ ಉಚಿತ ಸಾಮೂಹಿಕ ವಿವಾಹವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿಯಾದ ಬಳಿಕ ತಿಳಿಸಲಾಗುವುದೆಂದು ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.