ಚಾಮರಾಜನಗರ:ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-೧೯ ಪ್ರಕರಣಗಳು ಹೆಚ್ಚಳವಾಗದಂತೆ ತಡೆಯಲು ಮುಂಜಾಗೃತ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಹಾಗೂ ಸಂಬಂಧಿಸಿದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮುಚ್ಚಿದ ಸಂರಚನೆಯನ್ನು (ಅಟoseಜ ಂಡಿeಚಿs) ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆಟೀರಿಯ, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟಲ್‌ಗಳು, ಕಚೇರಿಗಳು, ಕಾರ್ಖಾನೆಗಳು ಇನ್ನಿತರ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸಿ ಒಳಬರುವವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲೀಕರ, ಆಡಳಿತಗಳ ಜವಾಬ್ದಾರಿಯಾಗಿದೆ.
ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಐಎಲ್‌ಐ ಮತ್ತು ಸಾರಿ (SಂಖI) ಲಕ್ಷಣಗಳನ್ನು ಹೊಂದಿರುವವರು, ಹೈರಿಸ್ಕ್ ಗುಂಪಿನವರು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡಿಸುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು. ಅರ್ಹ ಜನರೆಲ್ಲರೂ ಪ್ರಿಕಾಷನರಿ ಡೋಸ್ ಸೇರಿದಂತೆ ಕೋವಿಡ್ ಲಸಿಕೆಯನ್ನು ಪಡೆಯಬೇಕು.
ಕೋವಿಡ್-೧೯ ನಿರ್ವಹಣೆಯ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆ ೨೦೦೫ರ ಸೆಕ್ಷನ್ ೫೧ ರಿಂದ ೬೧ ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ ೧೮೮ ರ ಅಡಿಯಲ್ಲಿ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
