
ಆಸ್ಪ್ರೇಲಿಯಾದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಚೆನ್ನೈನ ಬ್ರಾಹ್ಮಣ ಹುಡುಗಿ ಮಿನಿ ರಾಮನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಲು ಸಜ್ಜಾಗಿದ್ದು, ತಮಿಳಿನಲ್ಲಿರುವ ಮದುವೆ ಆಮಂತ್ರಣ ಪತ್ರ ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗಿದೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅವರು ಹಿಂದೂ ಸಂಪ್ರದಾಯದಂತೆ ಮಾರ್ಚ್ 27ರಂದು ವಿನಿ ರಾಮನ್ ಜೊತೆ ಸಪ್ತಪದಿ ತುಳಿಯಲು ಮುಂದಾಗಿದ್ದಾರೆ.
ವಿನಿ ರಾಮನ್ ಔಷಧ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಾರ್ಚ್ 27ರಿಂದಲೇ 2022ನೇ ಸಾಲಿನ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಆರಂಭವಾಗುವ ಸಾಧ್ಯತೆ ಇದ್ದು, ಆರಂಭಿಕ ಕೆಲ ಪಂದ್ಯಗಳಿಗೆ ಗ್ಲೆನ್ ಮ್ಯಾಕ್ಸ್ವೆಲ್ ಗೈರಾಗಬಹುದು ಎನ್ನಲಾಗಿದೆ. ಗ್ಲೆನ್ ಮ್ಯಾಕ್ಸ್ವೆಲ್ 2021ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಮೋಘ ಪ್ರದರ್ಶನ ತೋರುವ ಮೂಲಕ ಮಿಂಚಿದ್ದರು.

ಇದರ ಬೆನ್ನಲ್ಲೇ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೆಗಾ ಹರಾಜಿಗೂ ಮುನ್ನ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ರೀಟೈನ್ ಮಾಡಿಕೊಂಡಿತ್ತು. ಗ್ಲೆನ್ ಮ್ಯಾಕ್ಸ್ವೆಲ್ ಜತೆಗೆ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಸಹಾ ಆರ್ಸಿಬಿ ರೀಟೈನ್ ಮಾಡಿಕೊಂಡಿದೆ.