ಚಾಮರಾಜನಗರ: ಚಾಮರಾಜನಗರ ವಿಧಾನಸಭಾಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಮತ್ತು ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಜಿ.ಪಂ. ಮಾಜಿ ಅಧ್ಯಕ್ಷರಾದ ಸಿ.ಎ.ಮಹದೇವಶೆಟ್ಟಿರವರು ಸನ್ಮಾನಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಸಿ.ಎ.ಮಹದೇವಶೆಟ್ಟರು ನೇಮಕವಾಗಿದ್ದಾರೆ.
ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಪು ಶ್ರೀ ಶ್ರೀನಿವಾಸ್ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಚಿಕ್ಕಮಹದೇವು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಬಿ.ಕೆ .ರವಿ ಕುಮಾರ್, ಹರದನಹಳ್ಳಿ ಉಪ್ಪಾರ ಸಮಾಜದ ಗಡಿ ಯಜಮಾನರಾದ ಜಯಸ್ವಾಮಿ,ಪಿಎಸಿಸಿ ಮಾಜಿ ಅಧ್ಯಕ್ಷರಾದ ಬಂಗಾರ ಶೆಟ್ಟಿ, ಯಡಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶ್ ರವರು ಉಪಸ್ಥಿತರಿದ್ದರು.
