ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ ಕ್ಷೇತ್ರ ಹಾಗೂ ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾದಿಂದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ನಗರಪಾಲಿಕೆ ಸದಸ್ಯ ಪ್ರಮೀಳಾ ಭರತ್ ಮಾತನಾಡಿ ‘ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ. ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ವರ್ತನೆ ಖಂಡನೀಯ’ ಎಂದು ದೂರಿದರು.
‘ಕಾಂಗ್ರೆಸ್ ನಾಯಕರ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. .
ಈ ಸಂದರ್ಭದಲ್ಲಿ ಬಿಜೆಪಿ ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಹೆಚ್ .ಜಿ ಗಿರಿಧರ್ ,ಬಿಜೆಪಿ ನಗರ ಯುವಮೋರ್ಚಾ ಉಪಾಧ್ಯಕ್ಷರು ಕಾರ್ತಿಕ್ ಮರಿಯಪ್ಪ , ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಭರತ್ , ನಗರ ಪಾಲಿಕೆ ಸದಸ್ಯರಾದ ಪ್ರಮಿಳ ಭರತ್ ,ನಗರ ಯುವ ಮೋರ್ಚ ಉಪಾಧ್ಯಕ್ಷ ಸಚಿನ್ ,ಚಾಮರಾಜ ಕ್ಷೇತ್ರದ ಯುವ ಮೋರ್ಚ ಅಧ್ಯಕ್ಷ ಸಚಿನ್ ,ನರಸಿಂಹ ರಾಜ ಕ್ಷೇತ್ರದ ಯುವ ಮೋರ್ಚ ಅಧ್ಯಕ್ಷ ಲೋಹಿತ್ ,ನಗರ ಯುವ ಮೋರ್ಚ ಕಾರ್ಯದರ್ಶಿ ಪುನಿತ್ ,ಯುವ ಮೋರ್ಚ ಪದಾದಿಕಾರಿಗಳು ಉಪಸ್ಥಿತರಿದ್ದರು