ಚಾಮರಾಜನಗರ: ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಎಂ.ಮಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಸೈಯದ್ ಅಕ್ರಂ, ಜಿಲ್ಲಾ ಉಪಾಧ್ಯಕ್ಷ ಮಹೇಶ್ ಗೌಡ,
ಜಿಲ್ಲಾ ಪ್ರದಾನ ಕಾರ್ಯದರ್ಶಿ ಇಂತಿಯಾಜ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಿ.ಎನ್.ಉ? ಮುಖಂಡರಾದ ಪುರ್ಖಾನ್, ಸೈಯ್ಯದ್ ಹರದನಹಳ್ಳಿ ರಾಮಚಂದ್ರ, ವಿಜಯಕುಮಾರ್, ಮಹಮದ್ ಜಾವೀದ್, ಯುವಘಟಕದ ಅಬೀಬ್ ಸೇರಿದಂತೆ ಇತರರು ಹಾಜರಿದ್ದರು.