ಮೈಸೂರು, ಡಿಸೆಂಬರ್ – ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ-2021 ರ ಜಿಲ್ಲಾಮಟ್ಟದ ಸಿರಿಧಾನ್ಯಗಳ ಕಾರ್ಯಾಗಾರ ಹಾಗೂ ವಸ್ತುಪ್ರದರ್ಶನ ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು 2021ರ ಡಿಸೆಂಬರ್ 23ರಂದು ಬೆಳಗ್ಗೆ 10.30 ಗಂಟೆಗೆ ಊಟಿ ರಸ್ತೆಯಲ್ಲಿರುವ ಜೆ.ಎಸ್.ಎಸ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಡಾ.ಎಂ.ಮಹಂತೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೃಷಿ ಇಲಾಖೆ, ಜೆ.ಎಸ್.ಎಸ್. ಕೃಷಿ ವಿಜ್ಞಾನ ಕೇಂದ್ರ, ಜಿಲ್ಲಾ ಕೃಷಿಕ ಸಮಾಜ, ಕೃಷಿ ತಂತ್ರಜ್ಞರ ಸಂಸ್ಥೆ, ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಆತ್ಮ)ಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ಉದ್ಘಾಟನೆ ಮಾಡಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ.ಎಸ್.ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿಗಳು ಸಿ.ಜಿ.ಬೆಟಸೂರ್‌ಮಠ ಅವರು ವಹಿಸಲಿದ್ದು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎ.ಎಂ.ಯೋಗೀಶ್, ಬೆಂಗಳೂರು ಸಿಪಿಎಆರ್‌ಯ ಪ್ರಧಾನ ವಿಜ್ಞಾನಿಗಳಾದ ಡಾ.ಬಿ.ಟಿ.ರಾಯ್ಡು, ಜಂಟಿ ಕೃಷಿ ನಿರ್ದೇಶಕರಾದ ಡಾ.ಎಂ.ಮಹಂತೇಶಪ್ಪ, ಜೆಎಸ್‌ಎಸ್ ತೋಟಗಾರಿಕೆ ವಿಭಾಗ ನಿರ್ದೇಶಕರಾದ ಎನ್.ಎಂ.ಶಿವಶಂಕರಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಕಲ್ಮಹಳ್ಳಿ ಶಿವಕುಮಾರ್ ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ.


ಸಂಪನ್ಮೂಲ ವ್ಯಕ್ತಿಗಳಾಗಿ ಮಂಡ್ಯ ಬಿ.ಸಿ.ಫಾರಂ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಬಿ.ಎಸ್.ಸೌಮ್ಯಲತಾ, ಹೆಚ್.ಡಿ.ಕೋಟೆಯ ನಂಬಿಕೆ ಮಿಲ್ಲೆಟ್ ನಾಗರಾಜ್, ಸಿರಿಧಾನ್ಯ ಬೆಳೆಗಾರರು, ಪ್ರಗತಿಪರ ರೈತರಾದ ಹೊನ್ನೂರು ಪ್ರಕಾಶ್ ಅವರು ಹಾಜರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.