ಕನ್ನಡ ನಾಡು, ನುಡಿಗಾಗಿ ಹೋರಾಟ ಮಾಡಿದ ಕವಿ, ಸಾಹಿತಿ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂತಾಪ ಸೂಚಿಸಿದ್ದಾರೆ.

ಚಂದ್ರಶೇಖರ್ ಪಾಟೀಲ್ ನಿಧನ ತೀವ್ರ ದುಃಖ ತಂದಿದೆ. ಗೋಕಾಕ ಚಳವಳಿ ಸೇರಿದಂತೆ ಹಲವು ಜನಪರ ಚಳವಳಿಗಳಲ್ಲಿ ತೊಡಗಿಸಿಕೊಂಡಿದ್ದ ಚಂದ್ರಶೇಖರ್ ಪಾಟೀಲ್ ಅವರ ನಿಧನ ಕನ್ನಡ ನಾಡಿಗೆ ತುಂಬಲಾರದ ನಷ್ಟ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಚಂದ್ರಶೇಖರ್ ಪಾಟೀಲ್ ಅವರು ಕನ್ನಡ ಭಾಷಾ ಮಾಧ್ಯಮ ಕಲಿಕೆಗೂ ಒತ್ತು ನೀಡಿದವರು.

ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ, ಶಿಷ್ಯ ವರ್ಗ ಹಾಗೂ ಅಭಿಮಾನಿಗಳಿಗೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.