ಮೈಸೂರು : ಕೊಟ್ಟ ವ್ಯಕ್ತಿಯೂ ಶಾಶ್ವತವಲ್ಲ, ಪೀಠ ಮಾತ್ರ ಶಾಶ್ವತ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಕೊಟ್ಟ ವ್ಯಕ್ತಿಯೂ ಶಾಶ್ವತವಲ್ಲ, ಪೀಠ ಮಾತ್ರ ಶಾಶ್ವತ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೂಡಲಸಂಗಮ ಮಠದ ಶ್ರೀಗಳು ಮಠಕ್ಕೆ ನೀಡಿರುವ ದಾನದ ಕಾಣಿಕೆಗಳನ್ನು ಹಿಂತಿರುಗಿಸಲಾಗುವುದು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಪೀಠಕ್ಕೆ ಕೊಟ್ಟಿದ್ದೇನೆ ಹೊರತು ಯಾವುದೇ ಬೇರೆ ವ್ಯಕ್ತಿಗೆ ಕೊಟ್ಟಿಲ್ಲ. ಕೊಟ್ಟಿರುವ ವ್ಯಕ್ತಿಯೂ ಶಾಶ್ವತವಾಗಿರುವುದಿಲ್ಲ, ಆದರೆ ಮಠ ಮಾತ್ರ ಶಾಶ್ವತವಾಗಿ ಇದ್ದೆ ಇರುತ್ತದೆ. ಎಂದು ನಿರಾಣಿ ವ್ಯಾಖ್ಯಾನಿಸಿದರು.

ನಮ್ಮಂಥವರು ನೂರಾರು ವ್ಯಕ್ತಿಗಳು ಬರುತ್ತಾರೆ, ಹೋಗುತ್ತಾರೆ. ನಾನು ಮಠದ ಮೇಲಿನ ಗೌರವದಿಂದ ಕಾಣಿಕೆಗಳನ್ನು ಭಕ್ತಿ ರೂಪದಲ್ಲಿ ಕೊಟ್ಟಿದ್ದೇನೆ. ಇದು ನನಗೆ ನಮ್ಮ ಹಿರಿಯರು ಹೇಳಿಕೊಟ್ಟ ಪಾಠ ಭಕ್ತಿಭಾವದಿಂದ ಕೊಟ್ಟ ಕಾಣಿಕೆಯನ್ನು ಪ್ರಚಾರಕ್ಕಾಗಿ ಪಡೆಯುವ ವ್ಯಕ್ತಿ ನಾನಲ್ಲ ಎಂದು ನಿರಾಣಿ ಸ್ಪಷ್ಟಪಡಿಸಿದರು.

ನಮ್ಮ ಇಡೀ ಕುಟುಂಬವೇ ಸಮಾಜದಲ್ಲಿರುವ ಎಲ್ಲ ಮಠಗಳನ್ನು ಮಠಾದೀಶರನ್ನು ಅತ್ಯಂತ ಪೂಜ್ಯ ಭಾವನೆಯಿಂದ ಕಾಣುತ್ತಾ ಬಂದಿದ್ದೇವೆ. ಎಂಥ ಸಂದರ್ಭದಲ್ಲೂ ಕೂಡ ನಾವು ಯಾರನ್ನು ಅಗೌರವದಿಂದ ಕಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಮಠಗಳಿಗೆ ಕೊಟ್ಟ ಕಾಣಿಕೆಯನ್ನು ಹಿಂಪಡೆಯುವಂತಹ ಸಣ್ಣ ಬುದ್ದಿ ನನಗಿಲ್ಲ. ಅಂತಹ ಕೆಳಮಟ್ಟಕ್ಕೂ ನಾನು ಕಂಡಿತ ಹೋಗುವುದಿಲ್ಲ. ಶ್ರೀಗಳು ಯಾಕೆ ಈ ರೀತಿ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಕಳೆದ ಹಲವಾರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿರುವ ನಾವು ನಾಡಿನ ಎಲ್ಲ ಮಠಗಳನ್ನು ಮತ್ತು ಮಠಾಶರಿಗೆ ಗೌರವದಿಂದ ನಡೆದುಕೊಂಡು ಬಂದಿದ್ದೇವೆ. ನನ್ನ ಕುಟುಂಬದ ಸದಸ್ಯರು ಕೂಡ ಇದೇ ಭಾವನೆಯನ್ನು ಇಟ್ಟುಕೊಂಡಿದ್ದಾರೆ ಎಂದು ನಿರಾಣಿ ಹೇಳಿದರು.