ಗುಂಡ್ಲುಪೇಟೆ: ಪಟ್ಟಣ ವ್ಯಾಪ್ತಿಯ ಹಲವು ವಾರ್ಡ್‍ಗಳಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಶಾಸಕ ಸಿ.ಎಸ್.ನಿರಂಜನಕುಮಾರ್ ಮತಯಾಚನೆ ಮಾಡಿದರು.

ಪಟ್ಟಣದ ವಿಜಯ ನಾರಾಯಣ ಸ್ವಾಮಿ ದೇವಸ್ಥಾನದಿಂದ ಪ್ರಚಾರ ಆರಂಭಿಸಿದ ಶಾಸಕರ ಹಲವು ವಾರ್ಡ್ ನ ಮನೆ ಮನೆಗೂ ಭೇಟಿ ನೀಡಿ ಪದವೀಧರ ಮತದಾರರ ಹತ್ತಿರ ಮತಯಾಸಿದರು. ಈ ವೇಳೆ ಮಾತನಾಡಿ, ನಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2300 ಮತದಾರರಿದ್ದು, ಈಗಾಗಲೇ ಸಾವಿರಕ್ಕೂ ಹೆಚ್ಚು ಮತದಾರರನ್ನು ಭೇಟಿ ಮಾಡುವ ಮೂಲಕ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಮತಚಲಾಯಿಸುವಂತೆ ಮನವಿ ಮಾಡಲಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ಇದನ್ನು ಪದವೀಧರರು ಸಹ ನೋಡಿದ್ದಾರೆ. ಜೊತೆಗೆ ನಮ್ಮ ಆಡಳಿತ ಅವಧಿಯಲ್ಲಿ ಅನುಷ್ಠಾನ ಗೊಳಿಸಿರುವ ಯೋಜನೆಗಳ ಬಗ್ಗೆ ಅರಿತಿರುವ ಪದವೀಧರರು ಬಿಜೆಪಿ ಪಕ್ಷದ ಅಭ್ಯರ್ಥಿ ಮೈ.ವಿ.ರವಿಶಂಕರ್ ಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ವಿಶ್ವಾನವಿದೆ. ಮೈ.ವಿ.ರವಿಶಂಕರ್ ಕೂಡ ಹಿರಿಯರಾಗಿದ್ದು, ಪದವೀಧರರ ಕಷ್ಟಗಳನ್ನು ಅರಿತಿದ್ದಾರೆ. ಅವರು ಗೆದ್ದರೆ ಬಹುತೇಕ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಪಿ.ಗಿರೀಶ್, ಉಪಾಧ್ಯಕ್ಷೆ ದೀಪಿಕಾ ಅಶ್ವಿನ್, ಸದಸ್ಯರಾದ ನಾಗೇಶ್, ಶಶಿಧರ್ ಪಿ.ದೀಪು, ರಾಜ್ಯ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎನ್.ಮಲ್ಲೇಶ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹಂಗಳ ಪ್ರಣಯ್, ಮಂಡಲ ಅಧ್ಯಕ್ಷ ಡಿ.ಪಿ.ಜಗದೀಶ್, ತಾಪಂಮಾಜಿ ಸದಸ್ಯ ಸಿ.ಮಹದೇವಪ್ರಸಾದ್, ಶಿಂಡನಪುರ ಮಂಜುನಾಥ್, ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

ವರದಿ: ಬಸವರಾಜು ಎಸ್.ಹಂಗಳ