ಗ್ರಾಮೀಣ ಪ್ರದೇಶದ ಪ್ರತಿ ವಿದ್ಯಾರ್ಥಿಗೂ ಮೌಲ್ಯಾಧಾರಿತ ಹಾಗೂ ಗುಣಾತ್ಮಕ ಶಿಕ್ಷಣ ನೀಡುವುದೇ ನನ್ನ ಮೊದಲ ಆದ್ಯತೆ ಎಂದು ಶಾಸಕ ಕೆ ಮಹದೇವ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ವಿಭಾಗ ಸೇರಿದಂತೆ ಒಟ್ಟು 2.5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಾ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿಸಮನಾಗಿ ನಮ್ಮ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಶಿಕ್ಷಣ ದೊರಕಿದರೆ ಅವರು ನಮ್ಮ ದೇಶದ ದೊಡ್ಡ ಆಸ್ತಿಯಾಗುತ್ತಾರೆ. ಆದುದರಿಂದ ಪ್ರತಿಯೊಬ್ಬ ಗುರುವೂ ಸಮರ್ಪಣಾ ಭಾವದಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂದರು.
ಉಪಪ್ರಾಂಶುಪಾಲ ರೇವಣ್ಣ ಮಾತನಾಡಿ, ನಮ್ಮ ಶಾಲೆಗೆ ವಿದ್ಯಾರ್ಥಿಗಳಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಜೀವಶಾಸ್ತ್ರ ಉಪನ್ಯಾಸಕ ಜಯಣ್ಣ ಮಾತನಾಡಿ ಈ ಹಿಂದೆ ಪಾಳಿ ಪದ್ದತಿಯಲ್ಲಿ ತರಗತಿಗಳನ್ನು ನಡೆಸುತ್ತಿದ್ದೆವು ತಾಲ್ಲೂಕಿನಲ್ಲಿಯೆ ಅತಿ ಹೆಚ್ಚು ವಿದ್ಯಾರ್ಥಿಗಳು ನಮ್ಮ ಕಾಲೇಜಿಗೆ ಪ್ರವೇಶ ಪಡೆದಿದ್ದಾರೆ.ಉತ್ತಮ ಫಲಿತಾಂಶವೂ ಬರುತ್ತಿದೆ .ಸುಸಜ್ಜಿತವಾದ ಕಾಲೇಜಿನ ಕಟ್ಟಡ ನಿರ್ಮಿಸಿಕೊಡಲು ಸಹಕರಿಸಿದ ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ,ಪ್ರಾಂಶುಪಾಲ ರುದ್ರಪ್ಪ ,ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಕೆ ತಿಮ್ಮೇಗೌಡ, ದೈಹಿಕ ಶಿಕ್ಷಕ ನಾರಾಯಣ ಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಅಯ್ಯರ್ ಗಿರೀಶ್, ಇಮ್ರಾನ್, ಉಪನ್ಯಾಸಕರಾದ ಜ್ಯೋತಿ ಪ್ರಸಾದ, ಉಪ ತಹಶೀಲ್ದಾರ ಶಶಿಧರ್, ಕಂದಾಯ ನಿರೀಕ್ಷಕ ಆನಂದ್, ಅಭಿಯಂತರರಾದ ಪ್ರಭು , ದಿನೇಶ್, ಕುಮಾರ್, ಶಿಕ್ಷಕರಾದ ಗೊರಹಳ್ಳಿ ಜಗದೀಶ್, ಕೆಂಪರಾಜು,ಪಟೇಲ್ ನಟೇಶ್ , ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳು ವಿದ್ಯಾರ್ಥಿಗಳು. ಹಾಜರಿದ್ದರು
ಮಾಗಳಿ ರಾಮೇಗೌಡ ವರದಿಗಾರರು ಪಿರಿಯಾಪಟ್ಟಣ