ಮೈಸೂರು: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರು ಸಂಘದ ವತಿಯಿಂದ 26ನೇವಾರ್ಷಿಕೋತ್ಸವ ಅಂಗವಾಗಿ ನಿವೃತ್ತ ಬಡ್ತಿ ಹೊಂದಿದ ನೌಕರರು ಸಾಧಕರು ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನುಡಿನಮನ ಸಮಾರಂಭವನ್ನು ಮಾರ್ಚ್ 27ರಂದು ಮೈಸೂರು ನಗರ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಮಹದೇವಶೆಟ್ಟಿ (ಫಿಲ್ಮ್) ತಿಳಿಸಿದರು.
ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭದ ಸಾನಿಧ್ಯವನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಭಗೀರಥ ಪೀಠ ಡಾಕ್ಟರ್ ಪುರುಷೋತ್ತಮಾನಂದಪುರಿ ಸ್ವಾಮೀಜಿ ವಹಿಸುವರು ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು.
ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಭಗೀರಥ ಮಹರ್ಷಿ ಭಾವಚಿತ್ರ ಅನಾವರಣ ಮಾಡಲಿದ್ದಾರೆ ಮೈಸೂರು ಮಂಡ್ಯ ಕೊಡಗು ಚಾಮರಾಜನಗರ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ 4 ಜಿಲ್ಲೆ ಗಳಿಂದ 350 ಅರ್ಜಿಗಳು ಬಂದಿದ್ದು ಅದರಲ್ಲಿ ಚಾಮರಾಜನಗರ ಜಿಲ್ಲೆಯಿಂದ 250 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಲ್ಲದೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಸವ ಪ್ರದಾನ ಮಾಡಲಾಗುತ್ತದೆ ಚಾಮರಾಜನಗರದಲ್ಲಿ ಗಿಡ ನೆಟ್ಟು ಪೋಷಣೆ ಮಾಡುತ್ತಿರುವ ಸಿಎಂ ವೆಂಕಟೇಶ್ ರವರಿಗೆ ಭಗೀರಥ ವೃಕ್ಷಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಶ್ರೀ ಸಿ ಮಹಾದೇವಶೆಟ್ಟಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಈ ಕಾರ್ಯಕ್ರಮಕ್ಕೆ ಮೈಸೂರು ಮಂಡ್ಯ ಚಾಮರಾಜನಗರ ಜಿಲ್ಲೆಗಳಲ್ಲಿನ ಸಮುದಾಯದವರು ಸಂಘ-ಸಂಸ್ಥೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಕೊಡುವಂತೆ ಮನವಿ ಮಾಡಿದರು. ಈ ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ವಿದ್ಯಾರ್ಥಿ ಮುಖಂಡರಾದ ಶಿವರಾಜ್ ಶೇಷಾದ್ರಿ ಹಾಜರಿದ್ದರು.
