ಮೈಸೂರು, ಜೂನ್ 19: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆ, ಪರಿಸರ ಜಾಗೃತಿ ಹಾಗೂ ಪರಿಸರ ಸೇವೆಯಲ್ಲಿ ವಿಶೇಷ ಕೊಡುಗೆ ನೀಡಿರುವ ಸಾಧಕರನ್ನು ಗುರುತಿಸಿ ಸುವರ್ಣ ಬೆಳಕು ಫೌಂಡೇಶನ್ (ರಿ.), ಮೈಸೂರು ವತಿಯಿಂದ ‘ಸುವರ್ಣ ಪರಿಸರ ಪ್ರಶಸ್ತಿ’ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಮೈಸೂರಿನ ಪ್ರಕೃತಿ ಫುಡ್ ಆವರಣದಲ್ಲಿ ಜೂನ್ 20ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪರಿಸರ ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಂಡಿರುವ ಇಬ್ಬರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾವಯವ ಕೃಷಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರ ಸಾಧನೆಗಳನ್ನು ಸ್ಮರಿಸಲಾಗುವುದು. ಜೊತೆಗೆ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ತರಕಾರಿ ಹಾಗೂ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳವೂ ಏರ್ಪಡಿಸಲಾಗಿದೆ.
ಸಾರ್ವಜನಿಕರಿಗೆ ಆರೋಗ್ಯಕರ ಆಹಾರ ಪದ್ಧತಿ, ಪರಿಸರ ಸ್ನೇಹಿ ಕೃಷಿ ಮತ್ತು ಸಾವಯವ ಉತ್ಪನ್ನಗಳ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪರಿಸರ ಪ್ರೇಮಿಗಳು, ರೈತರು, ಕೃಷಿಕರು ಹಾಗೂ ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಫೌಂಡೇಶನ್ ಮನವಿ ಮಾಡಿದೆ.
#Environment #WorldEnvironmentDay #Mysuru #SuvarnaParisaraPrashasti #EnvironmentalConservation #OrganicFarming #Agriculture #AwardCeremony #Sustainability #Karnataka
