ಗುಂಡ್ಲುಪೇಟೆ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ ಕೀರ್ತಿ ನೆಹರು ಅವರಿಗೆ ಸಲ್ಲುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೆಲುವರಾಜು ತಿಳಿಸಿದರು.

ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜವಾಹರ ಲಾಲ್ ನೆಹರು ಅವರ 132ನೇ ಜನ್ಮದಿನ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಸ್ವತಂತ್ರ ನಂತರ ಎದುರಿಸಿದ ಆಹಾರ ಧಾನ್ಯಗಳ ಕೊರತೆ ನೀಗಿಸಲು ನೆಹರು ಪ್ರಾಮಾಣಿಕ ಪ್ರಯತ್ನ ಮಾಡಿದರು. ಪಂಚ ವಾರ್ಷಿಕ ಯೋಜನೆ ಮುಖಾಂತರ ದೇಶ ಹಸಿರು ಕ್ರಾಂತಿ, ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲು ಶ್ರಮಿಸಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಪೆÇೀಷಣ್ ಅಭಿಯಾನದ ತಾಲ್ಲೂಕು ಸಂಯೋಜಕ ಸಂತೋಷ ಮಾತನಾಡಿ, ಮಾಜಿ ಪ್ರಧಾನಿ ಪಂಡಿತ ಜವಾಹರ ಲಾಲ್ ನೆಹರು ಶ್ರೀಮಂತ ಕುಟುಂಬದಲ್ಲಿ ಜನಸಿದರೂ, ಬಡತನ ಮುಕ್ತ ಭಾರತ ದೇಶವಾಗಬೇಕು ಎಂಬ ದೂರದೃಷ್ಟಿ ಹೊಂದಿದ್ದ ಮಹಾನ್ ಪುರುಷ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಲ್ಲದೆ ದೇಶದ ಪ್ರಥಮ ಪ್ರಧಾನ ಮಂತ್ರಿಗಳಾಗಿ ದಕ್ಷ ಆಡಳಿತ ನಡೆಸಿದ ಸೇವೆ ಅನನ್ಯ ಹಾಗೂ ಸ್ಮರಣೀಯ. ಇಂತಹ ರಾಷ್ಟ್ರ¬ ನಾಯಕರ ಆದರ್ಶಗಳನ್ನು ಎಲ್ಲರೂ ಅಳವಡಿಸಿ¬ಕೊಂಡಾಗ ಅವರ ಜನ್ಮ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ರುದ್ರವ್ವ, ಅಂಗನವಾಡಿ ಕಾರ್ಯಕರ್ತೆಯರಾದ ಉಮಾ, ಗಂಗಮ್ಮ, ಮಂಜುಳ ಸೇರಿದಂತೆ ಗ್ರಾಮದ ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಗ್ರಾಪಂ ಮಾಜಿ ಅಧ್ಯಕ್ಷರು, ಸದಸ್ಯರು ಮತ್ತು ಅಶಾ ಕಾರ್ಯಕರ್ತೆಯರು ಹಾಜರಿದ್ದರು.

ವರದಿ: ಬಸವರಾಜು ಎಸ್ ಹಂಗಳ

By admin