ನಂಜನಗೂಡು :ನಂಜನಗೂಡು ತಾಲ್ಲೂಕು ನಾಯಕರ ಸಂಘದ ವತಿಯಿಂದ ಮಾರ್ಚ್ 8ರ ಭಾನುವಾರ ನಗರದ ವಾಲ್ಮೀಕಿ ಭವನದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ನಾಯಕರ ಸಂಘದ ಅಧ್ಯಕ್ಷ ನಾಗರಾಜು ಹೇಳಿದರು.


ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನೂತನವಾಗಿ ನಿರ್ಮಾಣವಾಗಿರುವ ತಾಲ್ಲೂಕಿನ ವಾಲ್ಮೀಕಿ ಭವನವನ್ನು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ನಾಯಕ ಜನಾಂಗದ ಬಡವರಿಗೆ ನೆರವು ನೀಡುವ ಸದುದ್ದೇಶದಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮಾರ್ಚ್ 8ರ ಭಾನುವಾರ ಬೆಳಗ್ಗೆ 10:30ಕ್ಕೆ ಉಚಿತ ಸಾಮೂಹಿಕ ವಿವಾಹ ನೆರವೇರಲಿದ್ದು ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ, ಎಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅವರ ಧರ್ಮಪತ್ನಿ ಸೌಮ್ಯ ಅನಿಲ್ ಚಿಕ್ಕಮಾದು ವಧು ವರರಿಗೆ ತಾಳಿ ಮತ್ತು ಸೀರೆ ಕುಪ್ಪುಸ ಬಾಗಿನ ವಿತರಣೆ ಮಾಡಲಿದ್ದಾರೆ, ವರನಿಗೆ ಶರ್ಟ್ ಪಂಚೆ ಮತ್ತು ಶಲ್ಯ ವಿತರಿಸಲಾಗುವುದು, ಕಾರ್ಯಕ್ರಮದಲ್ಲಿ ವಾಲ್ಮೀಕಿ ನಿಗಮ ಮಾಜಿ ಅಧ್ಯಕ್ಷ ಎಚ್. ಸಿ. ಬಸವರಾಜು, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ, ಜಿಪಂ ಮಾಜಿ ಸದಸ್ಯ ಸಿ.ಚಿಕ್ಕರಂಗ ನಾಯಕ, ಸೇರಿದಂತೆ ವಿವಿಧ ಹಂತದ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ, ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಗ್ರಾಮಗಳ ನಾಯಕ ಸಮುದಾಯದ ಯಜಮಾನರು, ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಶ್ರೀಕಂಠಸ್ವಾಮಿ, ಸೂರಹಳ್ಳಿ ಲಕ್ಷ್ಮಣ, ಸುಧೀಂದ್ರಕುಮಾರ್, ಪತ್ರಿಕಾ ಕಾರ್ಯದರ್ಶಿ ಆರ್.ಮಂಜು, ಸುತ್ತೂರು ರವಿ, ಉಪಸ್ಥಿತರಿದ್ದರು.

Leave a Reply