ಮೈಸೂರು:- ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜನವರಿ 8 ರಂದು “ಎಣ್ಣೆಕಾಳುಗಳು ಉತ್ಪನ್ನಗಳ ಮೌಲ್ಯವರ್ಧನೆ” ಎಂಬ ವಿಷಯದ ಬಗ್ಗೆ ರೈತರು/ ರೈತ ಮಹಿಳೆಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವ ರೈತರು/ ರೈತಮಹಿಳೆಯರಿಗೆ ಉಚಿತ ಊಟದ ವ್ಯವಸ್ಥೆಯನ್ನು ಒದಗಿಸಲಾಗುವುದು. ಆಸಕ್ತ ರೈತರು/ ರೈತಮಹಿಳೆಯರು ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಮಧುಲತಾ ಹೆಚ್.ಬಿ. ಮೊ. ಸಂಖ್ಯೆ 9945493589ಗೆ ಕರೆಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು.
ಕೇವಲ ಮೈಸೂರು ಜಿಲ್ಲೆಯ 50 ರೈತರು/ ರೈತಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಕೃಷಿ ಕೇಂದ್ರದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.