ಮೈಸೂರು:- ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ (Post Matric & Merit-Cum-Means Scholarship) ) ವಿದ್ಯಾರ್ಥಿ ವೇತನಕ್ಕೆ NSPಯಲ್ಲಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳು ಅಂತರ್ಜಾಲ ತಾಣ http://scholarships.gov.in/ ಅಥವಾ https://dom.karnataka.gov.in/ರಲ್ಲಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿಯ ಪ್ರತಿಯೊಂದಿಗೆ ಸೂಕ್ತ ದಾಖಲೆಗಲನ್ನು ಲಗತ್ತಿಸಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲಕರಿಗೆ ಹಾಗೂ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಒಂದೊಂದು ಪ್ರತಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 20, 2021 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳಾದ: ಮೈಸೂರು: 89510 87207, ತಿ. ನರಸೀಪುರ: 98452 10242, ನಂಜನಗೂಡು: 97435 67567, ಹೆಚ್.ಡಿ. ಕೋಟೆ: 96631 57476, ಕೆ.ಆರ್. ನಗರ: 99863 46893, ಹುಣಸೂರು: 96207 50935, ಪಿರಿಯಾಪಟ್ಟಣ: 88613 56751 ಗಳನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.