ಮೈಸೂರು, ಫೆಬ್ರವರಿ 19:- ಟಿ.ನರಸೀಪುರ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಪರ ಸರ್ಕಾರಿ ವಕೀಲರ ಗರಿಷ್ಠ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಈ ಹುದ್ದೆಯನ್ನು ಹೊಸ ಅಭ್ಯರ್ಥಿಯಿಂದ ಭರ್ತಿ ಮಾಡಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.
ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಾವಳಿ 1977ರ ನಿಯಮ 5 ಮತ್ತು 26(2) ಹಾಗೂ 12(ಎ)(ಬಿ) ಮತ್ತು (ಸಿ)ರಲ್ಲಿ ತಿಳಿಸಿರುವ ಅಗತ್ಯ ಷರತ್ತುಗಳನ್ನು ಪೂರೈಸಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ವಕೀಲ ವೃತ್ತಿಯನ್ನು 7 ವರ್ಷಗಳ ಕಾಲ ಪೂರೈಸಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿನ ಅನುಭವ, ಇತ್ಯಾದಿ ವಿವರಗಳನ್ನು ನಮೂದಿಸಿದ ಸ್ವಯಂ ವಿವರಣೆಯ ಮಾಹಿತಿಯೊಂದಿಗೆ (ಬಯೋಡೆಟಾ) ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿ ರಾಜ್ಯ ಬಾರ್ ಕೌನ್ಸಿಲ್ ನೊಂದಣಿ ಮತ್ತು ವಕೀಲ ವೃತ್ತಿಯಲ್ಲಿ ಹೊಂದಿರುವ ಅನುಭವದ ಬಗ್ಗೆ ಸ್ಥಳೀಯ ವಕೀಲರ ಸಂಘದ ದೃಢೀಕರಣ ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು 2022 ರ ಮಾರ್ಚ್ 8 ರೊಳಗಾಗಿ ಕಚೇರಿ ವೇಳೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು ಎಂದು ಅವರು ತಿಳಿಸಿದ್ದಾರೆ.