ಮೈಸೂರು, – ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ “ಅತ್ಯುತ್ತಮ ಸೇವೆ” ಸಲ್ಲಿಸಿರುವುದಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ “ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕ” ವನ್ನು ಎಸ್. ನವೀನ್ ಎಂಬುವವರು ಇಂದು ಮಾನ್ಯ ಮುಖ್ಯಮಂತ್ರಿಯವರಿಂದ ಪಡೆದಿರುತ್ತಾರೆ.
ಬೆಂಗಳೂರಿನ ಹೆಬ್ಬಾಳ್‍ನಲ್ಲಿರುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಚಾಲಕರಾಗಿ ಎಸ್.ನವೀನ್ ಅವರು ಸುಮಾರು 14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಾ ಸೇವೆ ಸಲ್ಲಿಸುತ್ತಿದ್ದಾರೆ. ಈ ಚಾಲಕ ವೃತ್ತಿಯ ಜೊತೆಯಲ್ಲಿ ಅಧಿಕಾರಿಗಳೊಂದಿಗೆ ಹಾಗೂ ತಾಂತ್ರಿಕ ಸಿಬ್ಬಂದಿಯೊಂದಿಗೆ ಅಗ್ನಿ ಅವಘಡ, ತುರ್ತು ಸೇವೆಯ ಸಂದರ್ಭದಲ್ಲಿ ಸಹಾಯ ಮಾಡಲು ಸದಾ ಸಿದ್ಧರಾಗಿರುತ್ತಾರೆ. 2019ರಲ್ಲಿ ಧಾರವಾಡದಲ್ಲಿ ನಡೆದ ಕಟ್ಟಡ ಕುಸಿದು ಸಂಭವಿಸಿದ ಅವಘಡದ ಸಂದರ್ಭದಲ್ಲಿ ತಮ್ಮ ಜೀವದ ಅಂಗನ್ನು ತೊರೆದು ಹಲವಾರು ಜೀವಗಳನ್ನು ರಕ್ಷಿಸಿದ ಕೀರ್ತಿಯು ಇವರದಾಗಿರುತ್ತದೆ.
ಈ ರೀತಿ ತಮ್ಮ ಸೇವಾವಧಿಯಲ್ಲಿ, ಅನೇಕ ಅಗ್ನಿ ಅವಘಡ, ತುರ್ತು ಸಂದರ್ಭ ಹಾಗು ಜೀವ ರಕ್ಷಣೆ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆಯನ್ನು ಹಾಗೂ ಇವರ ಉತ್ತಮ ಕಾರ್ಯದ ನಿರ್ವಹಣೆಯನ್ನು ಪುರಸ್ಕರಸಿ ಕರ್ನಾಟಕ ರಾಜ್ಯ ಸರ್ಕಾರವು ಇಂದು ಮಾನ್ಯ ಮುಖ್ಯಮಂತ್ರಿಯವರಿಂದ “ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕ”