ಕೇಂದ್ರ ಸರ್ಕಾರ ೨೦೨೨ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಿದೆ. ಇದರಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಲಭಿಸಲಿದೆ. ಇನ್ನೊಂದೆಡ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೂಡ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಈ ಸಲ ಒಟ್ಟು ನಾಲ್ವರಿಗೆ ಪದ್ಮ ವಿಭೂಷಣ ೧೭ ಜನರಿಗೆ ಪದ್ಮಭೂಷಣ ಹಾಗೂ ೧೦೭ ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದರಲ್ಲಿ ಕರ್ನಾಟಕದಲ್ಲಿನ ಒಟ್ಟು ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ವಿಜ್ಞಾನ ಮತ್ತು ಇಂಜಿನೀರಿಂಗ್ ವಿಭಾಗದಲ್ಲಿ ಕರ್ನಾಟಕದ ಶ್ರೀ ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಎಚ್. ಆರ್ ಕೇಶವಮೂರ್ತಿ ಅವರಿಗೆ ಕಲಾ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿದರೆ, ಗ್ರಾಸ್ ರೂಟ್ ಇನ್ನೋವೆಶನ್ಸ್ ನ ಅಬ್ದುಲ್ ಖಾದರ್ ನಡಕಟ್ಟಿನ್ ಅವರಿಗೆ ಇತರೆ ವಿಭಾಗದಲ್ಲಿ, ಅಮಾಯಿ ಮಹಾಲಿಂಗ್ ನಾಯಿಕ್ ಅವರಿಗೆ ಕೃಷಿ ಕ್ಷೇತ್ರದ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಸಾಹಿತಿ ಶ್ರೀ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ,

ಇನ್ನೊಂದೆಡೆ ಮೈಕ್ರೋಸಾಫ್ಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯಾ ನಾಡೆಲ್ಲಾ, ಅಲ್ಫಾಬೆಟ್ ಸಂಸ್ಥೆಯ ಸಿಇಓ ಆಗಿರುವ ಸುಂದರ್ ಪಿಚೈ, ಸಿರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸೈರಸ್ ಪೂನಾವಾಲಾ ಅವರಿಗೂ ಕೂಡ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ತಾಚಾರ್ಯ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಸಿಗಲಿದ.