ಮಂಡ್ಯ ಜಿಲ್ಲೆಯ ಹಿರಿಯ ಪತ್ರಕರ್ತ ಮಿತ್ರ, ಪಾಂಡವಪುರ ತಾಲೂಕು ಪತ್ರಕರ್ತರ ಸಂಘದ ಖಜಾಂಚಿ ಆಂಥೋಣಿ ರಾಬರ್ಟ್ ರಾಜ್(52) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.ರಾಬರ್ಟ್ ರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ. ಈ ದಿನ ಬೆಳಗ್ಗೆ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ನಡೆದ ಸಭಾಂಗಣದಲ್ಲಿ ಶಾಸಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಲಘು ಹೃದಯಾಘಾತವಾಗಿತ್ತು. ನಂತರ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆ ಪ್ರಾಥಮಿಕ ಚಿಕಿತ್ಸೆ ನಂತರ ಮೈಸೂರು ಜಯದೇವ ಆಸ್ಪತ್ರೆಗೆ ರವಾನಿಸಲಾಗಿತ್ತು. ಮತ್ತೆ ಮೂರು ಬಾರಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ

By admin