ಗುಂಡ್ಲುಪೇಟೆ: ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಆಗ್ರಹಿಸಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಶ್ರೀಗಳು ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್ ತೆರಳಿ ಶ್ರೀಗಳ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಶಾಸಕ ನಿರಂಜನಕುಮಾರ್, ಪರಿಶಿಷ್ಟ ಪಂಗಡದ 7.5 ಮೀಸಲಾತಿ ನೀಡುವ ಸಂಬಂಧ ಶ್ರೀಗಳಿಗೆ ಬೆಂಬಲವಾಗಿ ನಿಂತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು ಶೀಘ್ರವಾಗಿ ಮೀಸಲಾತಿ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರಾದ ಪಿ.ಗಿರೀಶ್ ಸೇರಿದಂತೆ ಇತರರು ಇದ್ದರು.

ವರದಿ: ಬಸವರಾಜು ಎಸ್.ಹಂಗಳ