ಫೆಬ್ರವರಿ 7 ಮತ್ತು 8 ರಂದು ಹರಿಹರ ತಾ. ರಾಜನಹಳ್ಳಿ ಗ್ರಾಮದಲ್ಲಿ ನಡೆಯಲಿರುವ 3ನೇ ರಾಜ್ಯ ಮಟ್ಟದ ವಾಲ್ಮೀಕಿ ಜಾತ್ರೆ ಕುರಿತಾದ ಪೂರ್ವಭಾವಿ ಸಭೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳು ಮತ್ತು ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಜಾತ್ರೆಯನ್ನು ಸುಸಜ್ಜಿತವಾಗಿ ನಡೆಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಸಭೆಯಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಶಾಸಕರು ಇನ್ನಿತರ ಜನಪ್ರತಿನಿಧಿಗಳು ಉಪಸ್ಥಿತರಿದ್ದಾರೆ.