ಗುಂಡ್ಲುಪೇಟೆ: ಪಟ್ಟಣದ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ನೇತೃತ್ವದಲ್ಲಿ ಮೀಸಲಾತಿ ಪ್ರಕಟಿಸಲಾಯಿತು.
ಕೆಲವು ಪಂಚಾಯಿತಿಗಳಿಗೆ ಲಾಟರಿ ಮೂಲಕ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿ ಪಡಿಸಿದರು. ಮತ್ತೆ ಕೆಲವು ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ತಂತ್ರಾಂಶದ ಮೂಲಕವೇ ಆಯ್ಕೆ ಮಾಡಲಾಯಿತು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ವಿವರ:
ಸೋಮಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ. ನೇನೇಕಟ್ಟೆ ಗ್ರಾಪಂ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ. ಮೂಖಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ. ಹುಂಡೀಪುರ ಗ್ರಾಪಂ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಪುತ್ತನಪುರ ಗ್ರಾಪಂ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ. ಕೂತನೂರು ಗ್ರಾಪಂ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ. ಬನ್ನಿತಾಳಪುರ ಗ್ರಾಪಂ ಅಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ. ಕೋಟೆಕೆರೆ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಮಹಿಳೆ. ನಿಟ್ರೆ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ. ಕೆಲಸೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಬಲಚವಾಡಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಭೀಮನಬೀಡು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ. ಹಂಗಳ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಬೊಮ್ಮಲಾಪುರ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಬಾಚಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಮಂಗಲ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಚಿಕ್ಕಾಟಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಬೇಗೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಎ’. ಅಗತಗೌಡನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಕಬ್ಬಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ. ಕಣ್ಣೆಗಾಲ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಬೇರಂಬಾಡಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಅಣ್ಣೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ ಮಹಿಳೆ. ತೆರಕಣಾಂಬಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಎ’. ಬರಗಿ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ ಮಹಿಳೆ. ಶಿವಪುರ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ ಮಹಿಳೆ. ಕೊಡಸೋಗೆ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಆಲತ್ತೂರು ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಎ’. ರಾಘವಾಪುರ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಪಡಗೂರು ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಹೊರೆಯಾಲ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ ಮಹಿಳೆ. ವಡ್ಡಗೆರೆ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಶಿಂಡನಪುರ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದೆ.
ವರದಿ: ಬಸವರಾಜು ಎಸ್ ಹಂಗಳ