ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಟ್ವೀಟ್ನಲ್ಲಿ ಏನಿದೆ : ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದಾರೆ.
.