ಗುಂಡ್ಲುಪೇಟೆ: ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕ ವತಿಯಿಂದ ಗುರುವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಂದ್ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಥ ನಡೆಸಿ ಎಂಡಿಸಿಸಿ ಬ್ಯಾಂಕ್ ವೃತ್ತದಲ್ಲಿ ಸಮಾವೇಶಗೊಂಡು ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹಾದೇವಪ್ಪ, ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯದ ಉದ್ದಗಲಕ್ಕೂ ಹಂತ ಹಂತವಾಗಿ ಪ್ರತಿಭಟನೆ ನಡೆಯುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ದೇಶದ ಬೆನ್ನೆಲುಬು, ರೈತ ಉದ್ದಾರ ಆದರೆ ಮಾತ್ರವೇ ದೇಶ ಉದ್ದಾರವಾಗುತ್ತದೆ. ಸರ್ಕಾರಗಳು ರೈತರ ಪರವಾಗಿದೆ ಎಂದು ಜನರನ್ನು ನಂಬಿಸಿ ರೈತರ ಕತ್ತು ಕುಯ್ಯುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಾಯ್ದೆಯನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಕಟುನಿರ್ಧಾರ ಕೈಗೊಂಡು ಉತ್ತರ ನೀಡುತ್ತಾರೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಶಿವಮಲ್ಲು, ಪ್ರಧಾನ ಕಾರ್ಯದರ್ಶಿ ಹಂಗಳ ಮಾಧು, ದೀಲಿಪ್, ಶಾಂತಮಲ್ಲಪ್ಪ ಮೊದಲಾದ ರೈತ ಮುಖಂಡರು ಇದ್ದರು.

ವರದಿ: ಬಸವರಾಜು ಎಸ್ ಹಂಗಳ

By admin