ಚಾಮರಾಜನಗರ: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಘಟನೆ ಖಂಡಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭೆ ವತಿಯಿಂದ ನಗರದಲ್ಲಿ ಸಂಗೊಳ್ಳಿರಾಯಣ್ಣ ಭಾವಚಿತ್ರಕ್ಕೆ ಹಾಲಿನ ಅಭಿ?ಕ ಮಾಡುವ ಮೂಲಕ ಎಂಇಎಸ್ ಪುಂಡರ ವಿರುದ್ದ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಭಾವಚಿತ್ರಕ್ಕೆ ಹಾಲಿನ ಅಭಿ?ಕ ಮಾಡಿ, ಸಂಗೊಳ್ಳಿರಾಯಣ್ಣ, ದೇಶಪ್ರೇಮಿ ಸಂಗೊಳ್ಳಿರಾಯಣ್ಣ ಅವರಿಗೆ ಜಯವಾಗಲಿ, ರಾಯಣ್ಣನ ವಿರೋಧಿಗಳ ವಿರುದ್ದ ಘೋಷಣೆ ಕೂಗುತ್ತಾ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಅಖಿಲಕರ್ನಾಟಕ ಕನ್ನಡ ಮಹಾಸಭೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಎಂಇಎಸ್ ಪುಂಡರು ಬೆಳಗಾವಿಯಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ. ಈ ಘಟನೆ ಬಗ್ಗೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲು ಮೀನಾಮೇ? ಎಣಿಸುತ್ತಿರುವುದು ಸರಿಯಲ್ಲ. ವಿರೋಧಪಕ್ಷದವರು ಘಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ. ನಿಮ್ಮಗಳ ಉದ್ದೇಶವಾದರೂ ಏನು ಎಂದು ಆರೋಪಿಸಿದರು.
ರಾಜ್ಯ ಸರಕಾರಕ್ಕೆ ರಾಜ್ಯದನೆಲಜಲದ ಮೇಲೆ ಗೌರವ ಕಾಳಜಿ ಇದ್ದರೆ ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿ?ಧ ಮಾಡುವ ದಿಟ್ಟ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ನಿಜಧ್ವನಿಗೋವಿಂದರಾಜು, ಪರ್ವತ್ ರಾಜ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ತಾಂಡವಮೂರ್ತಿ, ಆಟೋ ನಾಗೇಶ್, ಸಾಗರ್ ರಾವತ್, ಶಿವಶಂಕರನಾಯಕ, ನಂಜುಂಡಸ್ವಾಮಿ, ಮಲ್ಲೇಶ್, ಕಲಾವಿದ ರಾಜಶೇಖರ ಮೂರ್ತಿ, ಮಹದೇವೇಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.
