ಬೆಂಗಳೂರು: ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ಲೇಖಕಿ ರಾಜೇಶ್ವರಿ ತೇಜಸ್ವಿ(೮೫) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಆವರು, ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಬೆಳಗ್ಗೆ ನಿಧನರಾದರು.
ಖ್ಯಾತ ಕವಿ, ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿಯವರು ೧೯೩೭ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಜನಿಸಿದ್ದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂಎ ಓದುತ್ತಿದ್ದಾಗ ಪೂರ್ಣಚಂದ್ರ ತೇಜಸ್ವಿ ಅವರನ್ನು ೧೯೬೬ರಲ್ಲಿ ವಿವಾಹವಾಗಿದ್ದರು.
ಹೊಲಿಗೆ, ಅಂಚೆಚೀಟಿ ಸಂಗ್ರಹ, ರಾಜೇಶ್ವರಿ ಅವರ ನೆಚ್ಚಿನ ಹವ್ಯಾಸವಾಗಿತ್ತು. ರಾಜೇಶ್ವರಿ ಅವರು ಬರೆದಿರುವ `ನನ್ನ ತೇಜಸ್ವಿ ‘, `ನಮ್ಮ ಮನೆಗೂ ಬಂದರು ಗಾಂಧೀಜಿ’ ಎನ್ನುವ ಅವರ ಪುಸ್ತಕವೂ ಜನಪ್ರಿಯವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ನ ತೋಟದ ಮನೆಯಲ್ಲಿ ವಾಸವಾಗಿದ್ದ ರಾಜೇಶ್ವರಿ ಅವರು, ಇಬ್ಬರು ಪುತ್ರಿಯರನ್ನು ಇಂದು ಅಗಲಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಪುತ್ರಿ ಸುಶ್ಮಿತಾ ಅವರ ಮನೆಯಲ್ಲಿ ಸಂಜೆ ೫:೩೦ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ದೇಹದಾನ ಮಾಡಲು ಕುಟುಂಬ ನಿರ್ಧರಿಸಿದೆ.