ಚಾಮರಾಜನಗರ: ಮಂಡ್ಯಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಸರಕಾರಕ್ಕೆ ಕೋಡಿಮೋಳೆ ಭಗತ್‌ಯುವಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ರಾಜ್ಯದ ನಾನಾಕಡೆ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯದ ಪ್ರಕರಣಗಳು ನಡೆಯುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ. ಇಂತಹ ಅಮಾನವೀಯ ಪ್ರಕರಣಗಳ ಜತೆ ಮಳವಳ್ಳಿ ತಾಲೂಕಿನ ಶಾಲಾಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ, ಹತ್ಯೆಮಾಡಿರುವುದು ಸೇರಿದೆ. ಬಾಲಕಿಮೇಲೆ ಅತ್ಯಾಚಾರ ನಡೆಸಿರುವ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಲು ಸರಕಾರ ಕಾನೂನು ಕ್ರಮಕೈಗೊಳ್ಳಬೇಕು. ಶಾಲಾವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಮುಂದಿನದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗರೂಕ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಭಗತ್‌ಯುವಸೇನೆ ಅಧ್ಯಕ್ಷ ಕಾಂತರಾಜು, ಸಿದ್ದರಾಜು ಹಾಜರಿದ್ದರು.
ಮಳವಳ್ಳಿ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಸರಕಾರಕ್ಕೆ ಭಗತ್‌ಯುವಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
