ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಅವರು ಇಂದು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಇಂದು ಪಟ್ಟಮ್ಮಾಳ್ ವೀರಸ್ವಾಮಿ ಅವರು ಕೊನೆಯುಸಿರು ಎಳೆದಿದ್ದಾರೆ. ರವಿ ಚಂದ್ರನ್ ಅವರು ತಾಯಿಯ ಬಗ್ಗೆ ಅಪಾರ ಕಾಳಜಿ ಹಾಗು ಪ್ರೀತಿ ಹೊಂದಿದ್ದರು.

ಪಟ್ಟಾಮಾಳ್ ವೀರಸ್ವಾಮಿ ಅವರನ್ನು ಇಂದು ಮುಂಜಾನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 6.30ರ ಸುಮಾರಿಗೆ ಅವರು ನಿಧನ ಹೊಂದಿದರು. ಬೆಳಗ್ಗೆ 10.30ಕ್ಕೆ ಪಾರ್ಥಿವ ಶರೀರವನ್ನು ರಾಜಾಜಿನಗರದ ನಿವಾಸಕ್ಕೆ ತರಲಾಗುವುದು, ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ರವಿಚಂದ್ರನ್ ಕುಟುಂಬದವರು ತಿಳಿಸಿದ್ದಾರೆ.
ರವಿಚಂದ್ರನ್ ತಾಯಿ ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.


