ಗುಂಡ್ಲುಪೇಟೆ: ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳ ಓದುವ ಹವ್ಯಾಸದಿಂದ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಓದುವೆ ಬೆಳಕು ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ಶಿವಮೂರ್ತಿ ತಿಳಿಸಿದರು.

ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಗುಂಡ್ಲುಪೇಟೆ ಮತ್ತು ಹಂಗಳ ಗ್ರಾಮ ಪಂಚಾಯಿತಿ ಹಾಗೂ ಸೈನ್ಸ್ ಗ್ರಾವಿಟಿ ಪೌಂಡೇಷನ್ ಚಾಮರಾಜನಗರ ಇವರ ವತಿಯಿಂದ ಜಾರಿಗೆ ತಂದಿರುವ ‘ಓದುವೆ ಬೆಳಕು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲಾ-ಕಾಲೇಜು ತೆರೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ನೀಡುತ್ತಿಲ್ಲ. ಅವರನ್ನು ಮತ್ತೇ ಓದಿನ ಕಡೆ ಸೆಳೆಯಲು ಓದುವ ಬೆಳಕು ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಎಲ್ಲರೂ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಓದುವೆ ಬೆಳಕು ಕಾರ್ಯಕ್ರಮದಡಿ ಸಾಂಕೇತಿಕವಾಗಿ 20 ವಿದ್ಯಾರ್ಥಿಗಳನ್ನು ನೋಂದಾಯಿಸಿ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಿಡಿಓ ಕುಮಾರಸ್ವಾಮಿ, ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್, ರವಿಕುಮಾರ್, ಬಿ.ಆರ್.ಪಿ. ಚಂದ್ರಶೇಖರ ಮೂರ್ತಿ, ಶಿಕ್ಷಕರಾದ ರಾಜು, ಶ್ರೀನಿವಾಸನಾಯಕ ಸೇರಿದಂತೆ ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿದ್ದರು.

ವರದಿ: ಬಸವರಾಜು ಎಸ್ ಹಂಗಳ

By admin