ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ವಿವಿಧ ಬ್ಯಾಂಕುಗಳು (ಐಬಿಪಿಎಸ್) ಮುಂದಿನ ದಿನಗಳಲ್ಲಿ ನಡೆಸಲಿರುವ ಬ್ಯಾಂಕಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಏರ್ಪಡಿಸಿದೆ.

ಜನವರಿ ೨೮ ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಕರಾಮುವಿ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ತರಬೇತಿಯನ್ನು ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ             ಡಾ. ಬಿ. ಸದಾಶಿವೇಗೌಡ ಅವರು ಉದ್ಘಾಟಿಸುವರು.

ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಸಮಾರಂಭದ ಅಧ್ಯಕ್ಷತೆ ವಹಿಸಿ ತರಬೇತಿ ಶಿಬಿರಾರ್ಥಿಗಳಿಗೆ  ಶುಭಹಾರೈಸುವರು. ಕುಲಸಚಿವ ಪ್ರೊ. ಆರ್. ರಾಜಣ್ಣ ಉಪಸ್ಥಿತರಿರುವರು.

ತರಬೇತಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಇನ್ನು ಕಾಲವಕಾಶವಿದ್ದು ವಿವರಗಳಿಗೆ ೦೮೨೧-೨೫೧೫೯೪೪ / ೯೯೬೪೭೬೦೦೯೦ ಸಂಪರ್ಕಿಸಬಹುದು ಎಂದು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.