ಜಿಲ್ಲಾ ಪೋಲಿಸ್ ವತಿಯಿಂದ ನಂಜನಗೂಡಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ಮಾಸಾಚರಣೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೀದಿ ನಾಟಕ ಮಾಡಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್, ಡಿವೈಎಸ್‌ಪಿ ಗೋವಿಂದರಾಜು, ಸಿಪಿಐ ಲಕ್ಷ್ಮಿಕಾಂತ್ ತಳವಾರ್, ಪಿಎಸ್‌ಐ ಸತೀಶ್, ರವಿಕುಮಾರ್, ಮಹೇಂದ್ರ, ರಾಘವೇಂದ್ರ, ಚಲುವಯ್ಯ, ಜಯಲಕ್ಷ್ಮಿ ಇನ್ನಿತರರು ಉಪಸ್ಥಿತರಿದ್ದರು.