ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ (ಕರಾಟೆ, ಜುಡೋ, ಟೈಕ್ವಾಂಡೋ) ಕಾರ್ಯಕ್ರಮವನ್ನು ನಗರದ ವೃತ್ತಿಪರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ವಿದ್ಯಾರ್ಥಿನಿಯರು ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು. ದೌರ್ಜನ್ಯಗಳಿಂದ ಸ್ವಯಂ ರಕ್ಷಣೆ ಪಡೆದು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ರೇವಣ್ಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಭಾಗಿರಥಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಿ. ಮೋಹನ್ ರಾಜ್ ಮತ್ತು ನಿಲಯ ಮೇಲ್ವಿಚಾರಕರು ಕಾರ್ಯಕ್ರಮದಲ್ಲಿ ಉಪಸ್ಧಿತರಿದ್ದರು.

.