ಚಾಮರಾಜನಗರ: ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ನಗರದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಜಾಥಾಗೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು
ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಆಕಸ್ಮಿಕ ಅಪಘಾತ, ಶಸ್ತ್ರ ಚಿಕಿತ್ಸೆಗಳ ಸಂದರ್ಭಗಳಲ್ಲಿ ಅಮೂಲ್ಯವಾದ ಜೀವಗಳನ್ನು ಉಳಿಸಲು ಸಹಕರಿಸಬೇಕು ಎಂದರು.
ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಿ ಇತರರ ಜೀವರಕ್ಷಣೆಗೆ ಮುಂದಾಗಬೇಕು. ಸಂತೋ?ದಿಂದ ರಕ್ತದಾನ ಮಾಡೋಣ, ಮತೊಬ್ಬರು ಸಂತೋ?ವಾಗಿ ಬಾಳಲು ಅನುವು ಮಾಡಿ ಕೊಡೋಣ ಎಂಬ ಪ್ರಸಕ್ತ ವ?ದ ಘೋ?ವಾಕ್ಯ ದೊಂದಿಗೆ ಶಿಬಿರಗಳಲ್ಲಿ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ಎಂದು ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎಂ.ಎಸ್. ರವಿಕುಮಾರ್ ಅವರು ಮಾತನಾಡಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕೆಲವೊಮ್ಮೆ ರಕ್ತ ಸಿಗದೇ ಪರದಾಡುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಸಂಧರ್ಭಗಳಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಅರೋಗ್ಯವಂತರು ರಕ್ತದಾನ ಮಾಡಿ ಜೀವ ರಕ್ಷಣೆಗೆ ಮುಂದಾಗಬೇಕು ಎಂದರು.
ರೋಟರಿ ಕ್ಲಬ್ ಸಿಲ್ಕ್ ಸಿಟಿ ಅಧ್ಯಕ್ಷರಾದ ರವಿ ಅವರು ಮಾತನಾಡಿ ಜಿಲ್ಲೆಯಲ್ಲಿ ಸುಸಜ್ಜಿತವಾದ ಜಿಲ್ಲಾಸ್ಪತ್ರೆ ಇದ್ದು ರಕ್ತದಾನ ಘಟಕಕ್ಕೆ ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲಾಗಿದೆ. ಇದರಿಂದ ರಕ್ತ ಶುದ್ದೀಕರಣ, ರಕ್ತಕಣ ವಿಂಗಡಣೆಗೆ ಅನುಕೂಲವಾಗಲಿದೆ. ಸಾರ್ವಜನಿಕರು ರಕ್ತದಾನ ಮಾಡಲು ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್, ರೋಟರಿ ಕ್ಲಬ್ ಸಿಲ್ಕ್ ಸಿಟಿ ಸದಸ್ಯರಾದ ವಿಶ್ವಾಸ್, ಜಿಲ್ಲಾ ಏಡ್ಸ್ ನಿಯಂತ್ರಣ ಮೇಲ್ವಿಚಾರಕರಾದ ಮಂಜುನಾಥ್ ಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಇನ್ನಿತರರು ಇದ್ದರು.
