ಚಾಮರಾಜನಗರ: ಶ್ರೀ ಭಗೀರಥ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಶ್ರೀ ಭಗೀರಥರ ಭಾವಚಿತ್ರಕ್ಕೆ ಪು?ರ್ಚನೆ ನೆರವೇರಿಸಿ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮೆರವಣಿಗೆ ಉದ್ಘಾಟಿಸಿ, ಎಲ್ಲರಿಗೂ ಶುಭ ಕೋರಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಹಲವು ಮಹರ್ಷಿಗಳ, ದಾರ್ಶನಿಕರ, ಚಿಂತಕರ, ತತ್ವಜ್ಞಾನಿಗಳ, ಅನುಭವ ಜನ್ಯವಾದ ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ವಿಶ್ವದಲ್ಲಿಯೇ ಅದ್ವಿತೀಯ ಸ್ಥಾನವನ್ನು ಪಡೆದಿದೆ ಎಂದರು.
ಮಾನವ ಜನಾಂಗದ ಉದ್ದಾರಕ್ಕೆ ಕಾಲಕಾಲಕ್ಕೆ ಅಗತ್ಯ ಮಾರ್ಗದರ್ಶನ ಮಾಡುತ್ತಾ ಸಮಾಜವನ್ನು ಸಂಸ್ಕೃತಿ ಸಂಪನ್ನ ರಾಷ್ಟ್ರವನ್ನಾಗಿ ರೂಪಿಸುವುದರಲ್ಲಿ ಮಹರ್ಷಿಗಳ ಕೊಡುಗೆ ಅವಿಸ್ಮರಣೀಯವಾದದ್ದು. ಈ ಪೈಕಿ ಶ್ರೀ ಭಗೀರಥ ಮಹರ್ಷಿಗಳು ಅಗ್ರಗಣ್ಯ ಮತ್ತು ಶ್ರೇ?ರೆನಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ತಮ್ಮ ಅಚಲ ಪ್ರಯತ್ನದಿಂದ ದೇವಲೋಕದ ಗಂಗೆಯನ್ನು ಧರೆಗಿಳಿಯುವಂತೆ ಮಾಡಿ ತಮ್ಮ ಪೂರ್ವಜರ ಆತ್ಮಗಳಿಗೆ ಶಾಂತಿ ದೊರಕಿಸಿಕೊಟ್ಟು ನಾಡನ್ನು ಸುಜನ ಮತ್ತು ಸುಫಲವನ್ನಾಗಿಸಿದ ಮಹಾನ್ ಛಲಗಾರ ಶ್ರೀ ಭಗೀರಥ ಮಹರ್ಷಿಗಳು ಎಂದರು.
ಹಳೆಯ ಮೈಸೂರು ಪ್ರಾಂತ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಉಪ್ಪಾರ ಸಮುದಾಯದವರು ಗಣನೀಯ ಸಂಖ್ಯೆಯಲ್ಲಿದ್ದು, ಇವರ ಶ್ರೇಯೋಭಿವೃದ್ಧಿಗೆ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಎಲ್ಲ ಸೌಲಭ್ಯಗಳನ್ನು ಸಮುದಾಯದ ಪ್ರತಿಯೊಬ್ಬರು ಪಡೆದುಕೊಂಡು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಉಸ್ತುವಾರಿ ಸಚಿವರು ತಿಳಿಸಿದರು.
ಛಲ ಬಿಡದ ಪ್ರಯತ್ನಕ್ಕೆ ಅನ್ವರ್ಥವಾಗಿರುವ ಭಗೀರಥರ ನೆನಪುಗಳು ಸದಾ ಹಸಿರಾಗಿದ್ದು, ಸರ್ವರಿಗೂ ಸ್ಪೂರ್ತಿಯಾಗಿವೆ. ಭಗೀರಥರಂತೆಯೇ ಇಂದಿನ ಕಾಲಘಟ್ಟದಲ್ಲಿ ಪವಿತ್ರಗಂಗೆಯನ್ನು ಶುದ್ದೀಕರಿಸಿದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರಮೋದಿಜೀಯವರು ಕೂಡ ಆಧುನಿಕ ಭಗೀರಥರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಜೀವ-ಜಲವನ್ನು ಉಳಿಸುವ ಮತ್ತು ಸಂರಕ್ಷಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಕೂಡ ಭಗೀರಥ ಪ್ರಯತ್ನಗಳಾಗಿರಲಿ ಎಂಬ ಆಶಯವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ವ್ಯಕ್ತಪಡಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.