ಗುಂಡ್ಲುಪೇಟೆ: ಪಟ್ಟಣದ ಶ್ರೀರಾಮ ಮಂದಿರದಲ್ಲಿ 114ನೇ ವರ್ಷದ ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ಗುರುವಾರ ಬಹಳ ವಿಜೃಂಭಣೆಯಿಂದ ನಡೆಯಿತು.
ಶ್ರೀರಾಮ ನವಮಿ ಹಿನ್ನೆಲೆ ಸತತ 12 ದಿನಗಳಿಂದ ನಾನಾ ಬಗೆಯ ಹೋಮ, ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ಗುರುವಾರ ಚೈತ್ರ ಪಂಚಮೀ ಹಿನ್ನೆಲೆ ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ಜರುಗಿತು.
ಪಟ್ಟಾಭಿಷೇಕ ಹಿನ್ನೆಲೆ ಶ್ರೀರಾಮ ದೇವರ ಉತ್ಸವ ಮೂರ್ತಿಗೆ ವಿವಿಧÀ ಬಗೆಯ ಅಭಿಷೇಕ, ವಿಶೇಷ ಅಲಂಕಾರ ಮಾಡುವ ಮೂಲಕ ಮಂಗಳಾರತಿ ನೆರವೇರಿಸಿದರು. ನಂತರ ಶ್ರೀರಾಮ ದೇವರ ಉತ್ಸವ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.
12 ಗಂಟೆಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು. ತದನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಶ್ರೀರಾಮ ಮಂದಿರದ ಆಡಳಿತ ಮಂಡಳಿ ಸದಸ್ಯರು ಹಾಗೂ ಮಹಿಳಾ ವಿಪ್ರಬಳಗದ ಸದಸ್ಯರು ಹಾಜರಿದ್ದರು.
ವರದಿ: ಬಸವರಾಜು ಎಸ್.ಹಂಗಳ