ಗುಂಡ್ಲುಪೇಟೆ: ರಾಜ್ಯ ಭಾರತೀಯ ಜನತಾ ಪಕ್ಷ(ಬಿಜೆಪಿ) ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಹಾಗು ನಾಯಕ ಸಮಾಜದ ಮುಖಂಡ ಎನ್.ಮಲ್ಲೇಶ್ ನೇಮಕಗೊಂಡಿದ್ದಾರೆ.
ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿದ್ದ ಚಾಮರಾಜನಗರದ ಎಂ.ರಾಮಚಂದ್ರರಿಗೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಸ್ಥಾನ ದೊರೆತ ಹಿನ್ನಲೆ ಎನ್.ಮಲ್ಲೇಶ್ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಸಿಕ್ಕಿದೆ.
ಈ ವೇಳೆ ಮಾತನಾಡಿದ ಎನ್. ಮಲ್ಲೇಶ್, ರಾಜ್ಯದಲ್ಲಿ ಎಸ್ಟಿ ಸಮುದಾಯ ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ನನ್ನನ್ನು ಗುರುತಿಸಿ ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದು ವೈಯಕ್ತಿಕವಾಗಿ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸಲಾಗುವುದು ಎಂದರು.
ವರದಿ: ಬಸವರಾಜು ಎಸ್ ಹಂಗಳ