ಮೈಸೂರು, ಮಾ. 18: ಮೈಸೂರಿನ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೊದಲ ಬಾರಿಗೆ ೨೦೨೬ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಮೇ ೧೦ರಂದು ಆಯೋಜಿಸಲಾಗಿದೆ ಎಂದು ಫೌಂಡೇಷನ್ ಗೌರವಾಧ್ಯಕ್ಷ ಮಹೇಶ್ ತಿಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳ ಯೋಗ ಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಒದಗಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಪೂರ್ವ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್ ಪಟ್ಟ ಗೆದ್ದವರಿಗೆ ಆಕರ್ಷಕ ಟ್ರೋಫಿ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ವಿಶೇಷ ವಿಭಾಗಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಗುತ್ತದೆ. ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ಹಾಗೂ ಮೆಡಲ್ ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9448980010 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply