ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಮೈಸೂರಿನಲ್ಲಿ ಜೆ.ಪಿ.ನಗರ ಶರಣ ವೇದಿಕೆ ವತಿಯಿಂದ ನಿರ್ಮಿಸಲಾದ ಅಕ್ಕಮಹಾದೇವಿ ಪ್ರತಿಮೆ ಅನಾವರಣಗೊಳಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ವಿವಿಧ ಪ್ರಾಧಿಕಾರ, ನಿಗಮ- ಮಂಡಳಿ, ಅಧ್ಯಕ್ಷರು, ಅಧಿಕಾರಿಗಳು ಭಾಗವಹಿಸಿದರು.