ಚಾಮರಾಜನಗರ: ಅಸ್ಪೃಶ್ಯತೆ ನಿವಾರಣೆ, ಬಾಲ್ಯವಿವಾಹ, ಜೀತ ಪದ್ಧತಿಯಂತಹ ಹಲವು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸಲು ಬೀದಿ ನಾಟಕಗಳು ಸಹಕಾರಿಯಾಗಲಿವೆ ಎಂದು ಹಿರಿಯ ರಂಗಕರ್ಮಿ ಕೆ. ವೆಂಕಟರಾಜು ಅವರು ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿಂದು ಇಲಾಖೆಯ ೨೦೨೧-೨೨ನೇ ಸಾಲಿನ ವಿಶೇ? ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನಡೆದ ಸಾಮಾಜಿಕ ಅರಿವು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಸ್ಪೃಶ್ಯತೆ ನಿವಾರಣೆ ಅರಿವು ಮೂಡಿಸುವ ಬೀದಿನಾಟಕ ರಚನೆಯ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಈ ಹಿಂದಿನಿಂದಲೂ ಬೀದಿ ನಾಟಕಗಳು ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿವೆ. ಇದರಿಂದ ಸಾಕ? ಬದಲಾವಣೆಯೂ ಆಗಿದ್ದು ಜನರಲ್ಲಿ ಹೆಚ್ಚಿನ ಅರಿವು ಉಂಟಾಗಲು ನೆರವಾಗುತ್ತಿದೆ ಎಂದರು.
ಕನ್ನಡ ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಅನಿತಾ ಅವರು ಮಾತನಾಡಿ ರಚಿಸುವ ಬೀದಿ ನಾಟಕಗಳು ಸಮುದಾಯಗಳನ್ನು ಎಚ್ಚರಿಸಿ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ನೆರವಾಗಬೇಕು. ಇಲಾಖೆ ಹಮ್ಮಿಕೊಂಡಿರುವ ಉದ್ದೇಶ ಸಾರ್ಥಕವಾಗಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಪುಟ್ಟರಾಜು, ಮಹಾಲಿಂಗ ಗಿರ್ಗಿ, ಜಾನಪದ ಅಕಾಡೆಮಿ ಸದಸ್ಯರಾದ ಸಿ.ಎಂ. ನರಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎ. ರಮೇಶ್, ಕುಮಾರ್, ಕಿರಣ್ ಗಿರ್ಗಿ, ಮಹಾದೇವ ಸ್ವಾಮಿ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.