ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಿವೇದಿತಾ ನಗರ ಪಾರ್ಕ್‌ನಲ್ಲಿ ಶುದ್ದೀಕರಿಸಿದ ನೀರಿನಿಂದ ಕಾರ್ಯನಿರ್ವಹಿಸುವ ಕಾರಂಜಿಯನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶನಿವಾರ ಉದ್ಘಾಟಿಸಿದರು.
ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ವಲಯ ಆಯುಕ್ತ ಸತ್ಯಮೂರ್ತಿ ಅಧೀಕ್ಷಕ ಇಂಜಿನಿಯರ್ ರಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.