ಮೈಸೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ ಇತರೆ ಎಲ್ಲಾ ಪದಾಧಿಕಾರಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಮೈಸೂರು ನಗರ ಘಟಕದ ಅಧ್ಯಕ್ಷ ಮನೋಜ್.ಎನ್ ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ರೂಢ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ವಿದ್ಯಾರ್ಥಿ ನಾಯಕರ ಮೇಲೆ ಇಲ್ಲ ಸಲ್ಲದ ಸುಳ್ಳು ಕೇಸುಗಳನ್ನು ದಾಖಲಿಸಿ ಹೆದರಿಸುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆ ನಮ್ಮ ಮೂಲ ಹಕ್ಕು, ಪ್ರತಿಭಟಿಸುವವರನ್ನು ಜೈಲಿಗೆ ಹಾಕುವುದಾದರೆ ನಮ್ಮ ಮೂಲಭೂತ ಹಕ್ಕನ್ನು ಕಸಿದುಕೊಂಡಂತೆ ಎಂದ ಅವರು, ಬಂಧಿಸಿರುವ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತು ಪದಾಧಿಕಾರಿಗಳನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪತ್ರಿಕಾ ಗೊಷ್ಠಿಯಲ್ಲಿ ಎಚ್ಚರಿಸಿದರು.
ಪತ್ರಿಕಾ ಗೋಷ್ಟಿಯಲ್ಲಿ ಉಪಾಧ್ಯಕ್ಷ ರಜತ್, ಪದಾಧಿಕಾರಿಗಳಿದ್ದರು.