ಮೈಸೂರು. ನವೆಂಬರ್- ಇಂದಿನಿಂದ ರಾಜ್ಯಾದ್ಯಂತ ಕಾಲೇಜುಗಳು ಆರಂಭವಾಗುತ್ತಿವೆ, ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಆದರೆ ಕೊರೋನಾ ಕಾರಣದಿಂದ ಈ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಸ್. ಟಿ. ಸೋಮಶೇಖರ್ ಹೇಳಿದರು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಲೇಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು, ಯಾವುದೇ ಕಾರಣಕ್ಕೂ ಈ ಮಹಾಮಾರಿ ಬಗ್ಗೆ ನಿರ್ಲಕ್ಷ್ಯ ಬೇಡ. ಈ ಸೋಂಕು ಸಾಂಕ್ರಮಿಕ ಮಾದರಿಯಲ್ಲಿ ಹರಡುವುದರಿಂದ ಒಬ್ಬರಿಗೆ ಬಂದರೆ ಜೊತೆಗಿರುವ ಎಲ್ಲರಿಗೂ ಬರುತ್ತದೆ ಎಂಬ ಅಂಶವನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು.
ಈ ಹಿನ್ನೆಲೆಯಲ್ಲಿ ಜಾಗ್ರತೆಯಿಂದ ಇರಿ, ಸುರಕ್ಷಿತವಾಗಿರಿ, ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಎಸ್. ಟಿ. ಸೋಮಶೇಖರ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

By admin