ಚಾಮರಾಜನಗರ : ಚಾಮರಾಜನಗರ ವಿಧಾನ ಸಭಾ ಕ್ಷೇತ್ರ ಹಾಗೂ ತಾಲ್ಲೂಕು ಜಾತ್ಯಾತೀತ ಜನತಾ ದಳ ಅಧ್ಯಕ್ಷರಾಗಿ ಸೈಯದ್ ಅಕ್ರಂ ರವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ರವರು ನೇಮಿಸಿದ್ದಾರೆ.
ಜಿಲ್ಲಾ ಜಾತ್ಯಾತೀತ ಜನತಾದಳದ ಮಹಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರನ್ನು ಚಾಮರಾಜನಗರ ತಾಲ್ಲೂಕು ಘಟಕ ಹಾಗೂ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿರವರು ನೇಮಕ ಮಾಡಿದ್ದಾರೆ.
ಚಾಮರಾಜನಗರ ತಾಲ್ಲೂಕಿನಲ್ಲಿ ಜಾತ್ಯಾತೀತ ಜನತಾದಳ ಪಕ್ಷವನ್ನು ಸಂಘಟಿಸಿ ಮುಂದಿನ ದಿನಗಳಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕಿಳಿಸುವ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಜಾತ್ಯಾತೀತ ಜನತಾದಳ ಸಿದ್ದಾಂತ ಹಾಗೂ ಮಾಜಿಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರವರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಇಚ್ಚಿಸುವವರು ತಮ್ಮನ್ನು ಸಂರ್ಪಕಿಸುವAತೆ ಸೈಯದ್ ಅಕ್ರಂ ತಿಳಿಸಿದ್ದಾರೆ.
ಈಗಾಗಲೇ ಸೈಯದ್ ಅಕ್ರಂ ರವರು ಕಳೆದ ಕೆಲವು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು. ಇತ್ತೀಚಿಗೆ ಚಾಮರಾಜನಗರ ತಾಲ್ಲೂಕಿನಾದ್ಯಂತ ಹೋಬಳಿ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ದನೆಗೆ ಶ್ರಮಿಸುತ್ತಿದ್ದಾರೆ ಹಾಗೂ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷದಿಂದ ದೂರು ಇರುವ ಕಾರ್ಯಕರ್ತರನ್ನು ಮತ್ತೇ ಪಕ್ಷಕ್ಕೆ ಸೇರಿಸಿಕೊಳ್ಳುವ ಮರಳಿ ಮನೆಗೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಚಾಮರಾಜನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ತಳಹದಿಯಿಂದ ಸಂಘಟನೆ ಮಾಡುವ ಇಂಗಿತವನ್ನು ಸೈಯದ್ ಅಕ್ರಂ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಆಯ್ಕೆ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷ ಆರ್. ಎಂ. ಮಂಜುನಾಥ್ ರವರನ್ನು ಅಭಿನಂದಿಸಿದ್ದಾರೆ.